ನೀಟ್ ಪರೀಕ್ಷೆಯಲ್ಲಿನ ಅಕ್ರಮ: ಭ್ರಷ್ಟಾಚಾರ ತನಿಖೆಗೆ ಸೀಸಂದ್ರ ಗೋಪಾಲಗೌಡ ಒತ್ತಾಯ

ಕೋಲಾರ: ದೇಶಾದ್ಯಂತ ನಡೆದ ನೀಟ್‌ ಪರೀಕ್ಷೆಯಲ್ಲಿ ಅಕ್ರಮವಾಗಿದ್ದು ಇದರಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ವಿಧ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೂಡಲೇ ಉನ್ನತ ಮಟ್ಟದ ಸಂಸ್ಥೆಯಿಂದ ತನಿಖೆ ನಡೆಸುವಂತೆ ಎನ್.ಎಸ್.ಯು.ಐ ಮಾಜಿ ಜಿಲ್ಲಾ ಅಧ್ಯಕ್ಷ ಹಾಗೂ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್‌) ಕೆಲವರಿಗೆ ಹೆಚ್ಚು ಅಂಕಗಳು ಬಂದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ನೀಟ್‌ ಪರೀಕ್ಷೆ ಬರೆದ ಆಕಾಂಕ್ಷಿಗಳೇ ಆರೋಪಿಸಿದ್ದಾರೆ. ಈ ಕಾರಣದಿಂದಲೇ ಒಂದೇ ಪರೀಕ್ಷಾ ಕೇಂದ್ರದ 6 ಅಭ್ಯರ್ಥಿಗಳು ಸೇರಿದಂತೆ 67 ಅಭ್ಯರ್ಥಿಗಳು ಪ್ರಥಮ ರ್‍ಯಾಂಕ್‌ ಪಡೆಯಲು ಹೇಗೆ ಸಾಧ್ಯವಾಗುತ್ತದೆ ಇದರಿಂದಲೇ ಅಕ್ರಮವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ನೀಟ್‌ ಪರೀಕ್ಷೆ ಹಾಗೂ ಮೌಲ್ಯಮಾಪನ ಸರಿಯಾಗಿ ನಡೆಸಿಲ್ಲ ಜೊತೆಗೆ ಪರೀಕ್ಷೆ ಪ್ರಕ್ರಿಯೆ ಹಾಗೂ ಫಲಿತಾಂಶದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸಿವೆ. ಪರೀಕ್ಷೆ ದಿನವೇ ದೇಶದ ಹಲವೆಡೆ ಅಕ್ರಮಗಳು ನಡೆದಿದೆ ಎಂಬುದು ಬೆಳಕಿಗೆ ಬಂದಿತ್ತು. ಪ್ರಶ್ನೆ ಪತ್ರಿಕೆಗಳ ವಿತರಣೆಯಲ್ಲೂ ಅಕ್ರಮಗಳು ನಡೆದಿದ್ದು ಇದರಿಂದಾಗಿ ದೇಶದ ಭವಿಷ್ಯವನ್ನು ಸೃಷ್ಟಿಸುವ ವಿಧ್ಯಾರ್ಥಿಗಳ ಜೊತೆಗೆ ಕೇಂದ್ರ ಸರಕಾರವೇ ಚಲ್ಲಾಟವಾಡತ್ತಿದೆ ಎಂದು ಆರೋಪಿಸಿದರು

ಕೇಂದ್ರ ಸರ್ಕಾರವೇ ವೈದ್ಯಕೀಯ ಸಂಸ್ಥೆಗಳ ಪ್ರವೇಶಕ್ಕೆ ನಡೆಸುವ ಈ ಪರೀಕ್ಷೆಯ ಪಾರದರ್ಶಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅನುಮಾನ ಬಂದಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆಯ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಲ್ಲ ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಸೀಸಂದ್ರ ಗೋಪಾಲಗೌಡ ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *