ನೋಡ ನೋಡುತ್ತಿದ್ಧಂತೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ನೀರಿಗೆ ಕುಸಿದು ಬಿದ್ದು ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೇತುವೆಯ ಎರಡು ಭಾಗಗಳು ಒಂದರ ನಂತರ ಒಂದರಂತೆ ಕುಸಿಯುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
1,717 ಕೋಟಿ ರೂಪಾಯಿ ವೆಚ್ಚದಲ್ಲಿ ಬಿಹಾರದ ಖಗರಿಯಾದಲ್ಲಿ ಆಗುವನಿ ಸುಲ್ತಂಗಂಜ್ ನಲ್ಲಿ ಗಂಗಾ ನದಿಗೆ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ಸೇತುವೆಯ ಕನಿಷ್ಠ 3 ಅಡಿ ಭಾಗವು ಕೆಳಗಿರುವ ಗಂಗಾ ನದಿಗೆ ಕುಸಿದಿದೆ.
ಏಪ್ರಿಲ್‌ನಲ್ಲಿ ಚಂಡಮಾರುತದಿಂದಾಗಿ ಸೇತುವೆಗೆ ಸ್ವಲ್ಪ ಹಾನಿಯಾಗಿತ್ತು. ಖಗಾರಿಯಾ, ಆಗುವನಿ ಮತ್ತು ಸುಲ್ತಂಗಂಜ್ ನಡುವೆ ಗಂಗಾ ನದಿಗೆ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಎರಡು ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು.
ಬಿಹಾರ ಸಿಎಂ ನಿತೀಶ್ ಕುಮಾರ್ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಕುಸಿತಕ್ಕೆ ಕಾರಣರಾದವರನ್ನು ಗುರುತಿಸುವಂತೆ ಕೇಳಿದ್ದಾರೆ. ಘಟನೆ ಸಂಬಂಧ ‘ಪುಲ್ ನಿರ್ಮಾಣ್ ನಿಗಮ’ದಿಂದ ವರದಿ ಕೇಳಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…