ನೀರಿನ ಹೊಂಡಾದಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರಾಗರಾಳ್ಳುಗುಟ್ಟೆ ಬಳಿ ನಡೆದಿದೆ.
ಯುವತಿಗೆ ಸುಮಾರು 18-20 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…