ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್‌ನ ನರೋರಾ ಗಂಗಾ ಬ್ಯಾರೇಜ್‌ನಲ್ಲಿ ಎಂಟು ಅಡಿ ಉದ್ದದ ಮೊಸಳೆಯೊಂದು ಕಾಲುವೆಯಿಂದ ಹೊರಬಂದಿದೆ.
ಈ ಮೊಸಳೆ ಮತ್ತೆ ನೀರಿಗೆ ಹೋಗಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿನ ಫುಲ್ ವೈರಲ್ ಆಗಿದೆ. ಈ ಘಟನೆಯು ಸುತ್ತಮುತ್ತಲಿನ ಜನರಲ್ಲಿ ಭಯವನ್ನು ಉಂಟುಮಾಡಿತ್ತು.
ಅರಣ್ಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ನೀರಿಗೆ ಹೋಗಲು ಹೆಣಗಾಡುತ್ತಿದ್ದ ಮೊಸಳೆಯನ್ನು ರಕ್ಷಿಸುವ ಕಾರ್ಯ ನಡೆಸಿದರು.
ಮೊಸಳೆಯನ್ನು ಹಿಡಿದ ನಂತರ, ಅಧಿಕಾರಿಗಳು ಅದರ ಕೈ ಕಾಲುಗಳನ್ನು ಕಟ್ಟಿಹಾಕಿದರು ಮತ್ತು ಜನರು ಅದನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಸುರಕ್ಷಿತ ಸ್ಥಳಕ್ಕೆ ಬಿಟ್ಟರು.
ಇದೇ ರೀತಿಯ ನಿದರ್ಶನಗಳು ನಗರದಲ್ಲಿ ನಡೆದಿವೆ. ಅಕ್ಟೋಬರ್ 2022 ರಲ್ಲಿ, ಬುಲಂದ್‌ಶಹರ್‌ನ ಕಸ್ಬಾ ಪಹಾಸು ನಿವಾಸಿಗಳಲ್ಲಿ 10-ಅಡಿ ಉದ್ದದ ದೈತ್ಯ ಮೊಸಳೆಯು ಭೀತಿಯನ್ನು ಉಂಟುಮಾಡಿತು. ಸ್ಥಳೀಯರು ಮೊಸಳೆಯನ್ನು ಹಿಡಿದು ಓಡಿಸಲು ಯತ್ನಿಸಿದರಾದರೂ ವಿಫಲವಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಪೊಲೀಸರು ಮೂರು ಗಂಟೆಗಳ ಬಳಿಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…