ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮದಲ್ಲಿರುವ ನೀರಿನ ತೊಟ್ಟಿಗಳಲ್ಲಿ ಪಾಚಿ(ಕೊಪ್ಪಿಜೊಂಡು) ಸಂಗ್ರಹವಾಗಿದ್ದು, ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ತೊಟ್ಟಿಯಲ್ಲಿ ಸಂಪೂರ್ಣ ಪಾಚಿ ಸಂಗ್ರಹವಾಗಿದ್ದು, ನೀರು ಬಳಕೆಗೆ ಬಾರದಂತಾಗಿದೆ. ಜನ-ಜಾನುವರು, ಆಡು, ಕುರಿ, ಮೇಕೆಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಹಾಗೂ ರೈತರಿಗೆ ಅನುಕೂಲವಾಗಲೆಂದು ಈ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ತೊಟ್ಟಿಯ ಸುತ್ತ ಮಲಿನ ನೀರು ನಿಂತು ದುರ್ವಾಸನೆ ಬೀರುತ್ತಿದ್ದು, ಕಾಲಿಡಲಾಗದ ಪರಿಸ್ಥಿತಿ ಇದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಪಾಚಿ ನೀರು ಕುಡಿದ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಕೂಡಲೇ ಸಂಬಂಧಿಸಿದ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೊಟ್ಟಿ ಶುಚಿಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸಾಕಾಗಿ ಇಂದು ಊರಿನ ಯುವಕರು ಸೇರಿ ಗಿಡಗಂಟಿಗಳನ್ನು ತೆರವುಗೊಲಿಸಿ, ತೊಟ್ಟಿಗಳನ್ನು ಸ್ವಚ್ಛಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ…
ಗ್ರಾಮದಲ್ಲಿ ಒಟ್ಟು 4 ಮಿನಿ ಟ್ಯಾಂಕ್ ಗಳು, ಮೂರು ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇವುಗಳನ್ನು ಹಲವು ತಿಂಗಳುಗಳಿಂದ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ನಿರ್ವಹಣೆ ಮಾಡದೇ ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ತೊಟ್ಟಿ ಹಾಗೂ ಟ್ಯಾಂಕ್ ಗಳ ಸುತ್ತಾಮುತ್ತಾ ಪಾಚಿ, ಗಿಡಗಂಟಿಗಳು ಬೆಳೆದು ಸೊಳ್ಳೆಗಳ ತಾಣವಾಗಿದೆ. ರೋಗರುಜಿನಗಳ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ ಎಂದು ಕಿಡಿಕಾರಿದರು.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…