ನೀವು ಮತದಾನ ಮಾಡಿ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಿ- ಜಿಲ್ಲಾಧಿಕಾರಿ ಆರ್ ಲತಾ

ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು ಎನ್ನುವುದು ನನ್ನ ಆಶಯ ಎನ್ನುವ ಇಂಗಿತವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿ ಏರ್ಪಡಿಸಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚುನಾವಣಾ ವಿಶೇಷ ಧ್ವಜವನ್ನು ಹಾರಿಸುವುದರ ಮೂಲಕ ಹಾಗೂ ಮತದಾನದ ಮಹತ್ವ ಸಾರುವ ಬಲೂನುಗಳನ್ನು ಆಕಾಶಕ್ಕೆ ಹಾರಿ ಬಿಡುವುದರ ಮೂಲಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕುರಿತ ಸ್ವೀಪ್ ಕಾರ್ಯಕ್ರಮಗಳು ಜಿಲ್ಲಾ ಪಂಚಾಯತ್ ವತಿಯಿಂದ ಯಶಸ್ವಿಯಾಗಿ ನಡೆಯುತ್ತಿವೆ. ಮತದಾನ ಪ್ರಕ್ರಿಯೆ ಪಾರದರ್ಶಕ ಹಾಗೂ ನೈತಿಕತೆಯಿಂದ ಕೂಡಿರಬೇಕು. ಜೊತೆಗೆ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ , ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ 80 ವರ್ಷ ತುಂಬಿದ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ವಿಶೇಷ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿತ್ತು. 562 ಮತದಾರರು ಇದರ ಸದುಪಯೋಗ ಪಡೆಸಿಕೊಂಡಿದ್ದಾರೆ. ಉಳಿದ ಮತದಾರರು ಇಂದು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಮತದಾರರನ್ನು ಆಕರ್ಷಿಸಲು ಜಿಲ್ಲೆಯಲ್ಲಿ ವಿಷಯಾಧಾರಿತ (ಎಥ್ನಿಕ್ )ಮತಗಟ್ಟೆಗಳು, ಮಾದರಿ ಮತಗಟ್ಟೆಗಳು, ಸಖಿ ಮತಗಟ್ಟೆಗಳು, ಯುವ ಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ ಮತದಾನದ ಮಹತ್ವ ಅರಿತುಕೊಂಡು ಮೇ. 10 ರಂದು ತಪ್ಪದೇ ಮತದಾನ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಿ. ಎಲ್ಲರೂ ಮತದಾನ ಮಾಡಿ. ಅಕ್ರಮ ಅಥವಾ ಅನೈತಿಕ ಚುನಾವಣಾ ಚಟುವಟಿಕೆಗಳು ಕಂಡುಬಂದಲ್ಲಿ ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.

ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ನಾಗರಾಜ್ ಅವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಂಗವಾಗಿ ಮತದಾನದ ಮಹತ್ವ ಸಾರುವ ಬಣ್ಣ ಬಣ್ಣದ ರಂಗೋಲಿಗಳನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಂಗಣದಲ್ಲಿ ಬಿಡಿಸಿದ್ದು ವಿಶೇಷವಾಗಿತ್ತು. ಚುನಾವಣಾ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಕಲಾಜಾಥಾಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಂಗಣದಿಂದ ವೇಣುಗೋಪಾಲ ಸ್ವಾಮಿ ದೇವಾಲಯದವರೆಗೆ ಜಾಥಾದಲ್ಲಿ ತೆರಳಿ ಮತದಾನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಮತದಾನ ಜಾಗೃತಿಯ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪೌರಕಾರ್ಮಿಕರು , ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

4 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

15 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

19 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

22 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago