ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.
1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್ ನೀಡಲಾಗುವುದು.
ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.
2.ಗೃಹಲಕ್ಷ್ಮಿ ಗ್ಯಾರಂಟಿ:
ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.
ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.
3.ಶಕ್ತಿ ಗ್ಯಾರಂಟಿ:
ಜೂನ್ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.
4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.
5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್ ಪಿರಿಯಡ್ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.
6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…