Categories: ರಾಜ್ಯ

ನುಡಿದಂತೆ ನಡೆದ ಸಿಎಂ‌ ಸಿದ್ದರಾಮಯ್ಯ: ಐದು ಗ್ಯಾರಂಟಿ ಘೋಷಣೆ

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.

1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.

ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.

2.ಗೃಹಲಕ್ಷ್ಮಿ ಗ್ಯಾರಂಟಿ:

ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.

ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

3.ಶಕ್ತಿ ಗ್ಯಾರಂಟಿ:
ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.

4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.

5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.

6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

10 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

17 hours ago