
ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದೊಡ್ಡಹುಲ್ಲೂರು ಸಮೀಪ ನಡೆದಿದೆ.
ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆಯ ನಿಖರ ಕಾರಣ ಹಾಗೂ ಮೃತ ಯುವತಿಯ ಗುರುತು ಸೇರಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.