ನೂತನ ಜಿಲ್ಲಾಧಿಕಾರಿ ಎ.ಬಿ ಬಸವರಾಜ್ ಅವರಿಗೆ ಹೂವಿನ ಸಸಿ ನೀಡಿ ಸ್ವಾಗತಿಸಿದ ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸದಸ್ಯ ಆರ್.ವಿ ಮನು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನವಾಗಿ ನೇಮಕಗೊಂಡ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರನ್ನು ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸದಸ್ಯ ಆರ್.ವಿ ಮನು ಅವರು ಪರಿಸರ ಸಂಕೇತವಾಗಿರುವ ಹೂವಿನ ಸಸಿ ನೀಡುವ ಮೂಲಕ‌ ಸ್ವಾಗತಿ ಕೋರಿ‌ ಅಭಿನಂದನೆ ಸಲ್ಲಿಸಿದರು.

ನಂತರ ಬೀರಸಂದ್ರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳಿಗೆ ಕೆಲಸದ ಜೊತೆಗೆ ಆರೋಗ್ಯ ಕಾಳಜಿ ಮುಖ್ಯ, ಕೆಲಸದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಕೈ-ಕಾಲಿಗೆ ಗ್ಲೌಸ್, ರಕ್ಷಣಾತ್ಮಕ ಬಟ್ಟೆ ಧರಿಸುವುದರ ಬಗ್ಗೆ ಅರಿವು‌ ಮೂಡಿಸಬೇಕು.

ಪ್ರತಿ ತಿಂಗಳು ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ ಹಾಗೂ ಕೆಲಸದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಗಾರ ಏರ್ಪಡಿಸಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಯಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ರಜಾದಿನಗಳನ್ನು  ನೀಡಬೇಕು. ನಿವೇಶನ, ಮನೆ ಒದಗಿಸಬೇಕು, ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ಈ ವೇಳೆ ಮ್ಯಾಥೋ ಮುನಿಯಪ್ಪ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

14 minutes ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

3 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

6 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

12 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

1 day ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

2 days ago