
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿರುವ ಮಲ್ಲಪ್ಪನವರಿಗೆ ಇಂದು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ರಿ.ನಂ.47/74-75) ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಮೂರ್ತಿ (ರಾಮು ನೇರಳಘಟ್ಟ) ಅವರು ಹೂಗುಚ್ಛ ನೀಡುವ ಮೂಲಕ ಆಧರದ ಸ್ವಾಗತಕೋರಿದರು.
ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು….