ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್ ಆಯ್ಕೆಯಾಗಿದ್ದಾರೆ. ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ನೇಮಕವಾಗಿದ್ದಾರೆ.
ಇವರು ಅಮೆರಿಕದ ಮೊದಲ ಪೋಪ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿವೋಸ್ಟ್ ಲಿಯೋ XIV ಎಂಬ ಹೆಸರನ್ನು ಪಡೆದರು. ಇವರು ಇದೇ ಹೆಸರಿನಿಂದ ಇನ್ನು ಮುಂದೆ ಗುರುತಿಸಿಕೊಳ್ಳಲಿದ್ದಾರೆ.
ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡರು.
ಸಿಸ್ಟೀನ್ ಚಾಪೆಲ್‌ನ ಮೇಲಿರುವ ಚಿಮಣಿಯಿಂದ ಬಿಳಿ ಹೊಗೆ ಹೊರಬಂದ ಸುಮಾರು 70 ನಿಮಿಷಗಳ ನಂತರ ಪೋಪ್ ಲಿಯೋ, ಸೇಂಟ್ ಪೀಟರ್ಸ್ ಬೆಸಿಲಿಕಾದ ಕೇಂದ್ರ ಬಾಲ್ಕನಿಯಲ್ಲಿ ಕಾಣಿಸಿಕೊಂಡರು. ಇದರಲ್ಲಿ ಬಿಳಿ ಹೊಗೆ ಕಾಣಿಸಿಕೊಂಡರೆ ಪೋಪ್ ಆಯ್ಕೆ ಅಂತಿಮಗೊಂಡಿದೆ ಎಂದು ಅರ್ಥ. 133 ಕಾರ್ಡಿನಲ್ ಮತದಾರರು 140 ಕೋಟಿ ಸದಸ್ಯರ ಕ್ಯಾಥೋಲಿಕ್ ಚರ್ಚ್‌ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದ್ದಾರೆ ಎಂಬುದನ್ನು ಇದು ಸೂಚಿಸಿತ್ತು.
ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಆಗಿದ್ದ ಮತ್ತು 12 ವರ್ಷಗಳ ಕಾಲ ಚರ್ಚ್ ಅನ್ನು ಮುನ್ನಡೆಸಿದ್ದ ಪೋಪ್ ಫ್ರಾನ್ಸಿಸ್ ಅವರ ಕಳೆದ ತಿಂಗಳು ನಿಧನರಾಗಿದ್ದರು. ಅವರ ನಿಧನದ ನಂತರ ಲಿಯೋ 267ನೇ ಕ್ಯಾಥೋಲಿಕ್ ಪೋಪ್ ಆಗಿ ಆಯ್ಕೆಯಾಗಿದ್ದಾರೆ.
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…
ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ…