Categories: ವಿದೇಶ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆಯಾಗಿದ್ದಾರೆ. ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ನೇಮಕವಾಗಿದ್ದಾರೆ‌.

ಇವರು ಅಮೆರಿಕದ ಮೊದಲ ಪೋಪ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿವೋಸ್ಟ್ ಲಿಯೋ XIV ಎಂಬ ಹೆಸರನ್ನು ಪಡೆದರು. ಇವರು ಇದೇ ಹೆಸರಿನಿಂದ ಇನ್ನು ಮುಂದೆ ಗುರುತಿಸಿಕೊಳ್ಳಲಿದ್ದಾರೆ.

ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡರು.

ಸಿಸ್ಟೀನ್ ಚಾಪೆಲ್‌ನ ಮೇಲಿರುವ ಚಿಮಣಿಯಿಂದ ಬಿಳಿ ಹೊಗೆ ಹೊರಬಂದ ಸುಮಾರು 70 ನಿಮಿಷಗಳ ನಂತರ ಪೋಪ್ ಲಿಯೋ, ಸೇಂಟ್ ಪೀಟರ್ಸ್ ಬೆಸಿಲಿಕಾದ ಕೇಂದ್ರ ಬಾಲ್ಕನಿಯಲ್ಲಿ ಕಾಣಿಸಿಕೊಂಡರು. ಇದರಲ್ಲಿ ಬಿಳಿ ಹೊಗೆ ಕಾಣಿಸಿಕೊಂಡರೆ ಪೋಪ್‌ ಆಯ್ಕೆ ಅಂತಿಮಗೊಂಡಿದೆ ಎಂದು ಅರ್ಥ. 133 ಕಾರ್ಡಿನಲ್ ಮತದಾರರು 140 ಕೋಟಿ ಸದಸ್ಯರ ಕ್ಯಾಥೋಲಿಕ್ ಚರ್ಚ್‌ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದ್ದಾರೆ ಎಂಬುದನ್ನು ಇದು ಸೂಚಿಸಿತ್ತು.

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಆಗಿದ್ದ ಮತ್ತು 12 ವರ್ಷಗಳ ಕಾಲ ಚರ್ಚ್ ಅನ್ನು ಮುನ್ನಡೆಸಿದ್ದ ಪೋಪ್ ಫ್ರಾನ್ಸಿಸ್ ಅವರ ಕಳೆದ ತಿಂಗಳು ನಿಧನರಾಗಿದ್ದರು. ಅವರ ನಿಧನದ ನಂತರ ಲಿಯೋ 267ನೇ ಕ್ಯಾಥೋಲಿಕ್ ಪೋಪ್ ಆಗಿ ಆಯ್ಕೆಯಾಗಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago