ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ 54 ಲಕ್ಷ ರೂಗಳ ಸಿ.ಎಸ್.‌ಆರ್.‌ ಅನುದಾನದಡಿ ನಿರ್ಮಿಸಲಾದ ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರವನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ರವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಉತ್ಕೃಷ್ಟ ಮಟ್ಟದ ನೂತನ ಶಾಲಾ ಕಟ್ಟಡ ಹಾಗೂ ಅಂಗನವಾಡಿ ನಿರ್ಮಿಸಿ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು ತಿಳಿಸಿದರು.

ಹಾಗೆಯೇ ಹಿಂದೆ ಇದ್ದ ನಗರಸಭಾ ಸದಸ್ಯರು ಮುಂದೆ ಬರುವ ನಗರಸಭೆ ಸದಸ್ಯರೆಲ್ಲರೂ ಸಿ.ಸಿ.ರಸ್ತೆ,ಚರಂಡಿಗಳನ್ನು ನಿರ್ಮಿಸುತ್ತಾರೆ. ಆದರೆ ತಮ್ಮ ಅಧಿಕಾರಿಯವಧಿಯಲ್ಲಿ ಜನ ಸದಾಕಾಲವೂ ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಿದಾಗಲೇ ಜನರು ನಮ್ಮಗಳನ್ನು ನೆನೆಯುತ್ತಾರೆ. ಈ ನಿಟ್ಟಿನಲ್ಲಿ ವಾರ್ಡಿನ ನಗರಸಭೆ ಸದಸ್ಯೆ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ಮುಂದೆ ಸಹ ಜನರು ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಲಿ. ಹಾಗೇ ಎಲ್ಲಾ ಬಿಜೆಪಿ ನಗರಸಭೆ ಸದಸ್ಯರು ಉತ್ತಮವಾಗಿ ಮತದಾರರ ಆಶಯಗಳನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದಾರೆ ಇದು ನನಗೆ ವೈಯುಕ್ತಿಕವಾಗಿ ಖುಷಿಯನ್ನು ಕೊಡ್ತಿದೆ. ಹಾಗೇ ವಾರ್ಡಿನಲ್ಲಿ ಏನಾದರೂ ಕೆಲಸ ಕಾರ್ಯಗಳಿದ್ದರೆ ಖಂಡಿತವಾಗಿ ಮಾಡಿ ಕೊಡ್ತಿನಿ ಎಂದರು.

ಬಹಳ ವರ್ಷಗಳಿಂದ ಈ ವಾರ್ಡಿನ ಪಡಿತರ ವಿತರಣೆ ಕೇಂದ್ರ ಇಲ್ಲ. ವಿನಾಯಕನಗರದ ಜನರು ಮಾರುತಿನಗರದ ಪಡಿತರ ಅಂಗಡಿಯಲ್ಲಿ ರೇಷನ್ ಪಡೆಯುತ್ತಿದ್ದು, ಇದರಿಂದಾಗಿ ವಿನಾಯಕನಗರದ ಜನತೆಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂಬುದರ ಬಗ್ಗೆ ವಾರ್ಡಿನ ನಗರಸಭೆ ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ ಆ ನಿಟ್ಟಿನಲ್ಲಿ ವಿನಾಯಕನಗರದಲ್ಲಿ ಒಂದು ಪಡಿತರ ಕೇಂದ್ರ ತರುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುವ ಕೆಲಸ ಮಾಡಿ ವಾರ್ಡಿಗೆ ಒಂದು ಪಡಿತರ ವಿತರಣಾ ಕೇಂದ್ರ ವ್ಯವಸ್ಥೆ ಮಾಡುವೆ ಎಂದರು.

ಹಾಗೇ ಈವರೆಗೆ ಶಾಲೆಗೆ ನಗರಸಭೆ ವತಿಯಿಂದ ಖಾತೆಯನ್ನು ಮಾಡದೇ ಇರುವುದರ ಬಗ್ಗೆ ಶಾಲಾ ಶಿಕ್ಷಕರು ಶಾಸಕರ ಗಮನವನ್ನು ಸೆಳೆದಾಗ ಈ ಕೂಡಲೇ ಶಾಲೆ ಹಾಗೂ ಅಂಗನವಾಡಿಗೆ ನಗರಸಭೆ ವತಿಯಿಂದ ಖಾತೆಯನ್ನು ಮಾಡಿ ಕೊಡಬೇಕೆಂದು ಸೂಚಿಸಿದರು.ಇಲ್ಲವಾದರೇ ಸರ್ಕಾರಿ ಜಾಗ ಒತ್ತುವರಿಯಾಗಿ ಅನ್ಯರ ಪಾಲಾಗುತ್ತದೆ ಅದನ್ನು ತಡೆಯ ಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು.

ವಾರ್ಡಿನಲ್ಲಿರುವ ಗಣೇಶ ದೇವಸ್ಥಾನದ ಕಾಂಪೌಂಡ್ ನಿರ್ಮಾಣದ ಬಗ್ಗೆ ಸಾರ್ವಜನಿಕರ ಪ್ರಶ್ನೆ ಗೆ ಖಂಡಿತವಾಗಿ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ನಮ್ಮ ಸಹಕಾರ ಸದಾಕಾಲ  ಇರುತ್ತದೆ ಎಂದೂ ತಿಳಿಸಿದರು‌. ನೂತನ ಶಾಲೆಯಲ್ಲಿ ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ಶಿಕ್ಷಕರು ಶ್ರಮವಹಿಸಬೇಕೆಂದೂ ಸೂಚಿಸಿದರು.

ಇದೇ ಸಂಧರ್ಭದಲ್ಲಿ ವಾರ್ಡಿನ ನಗರಸಭಾ ಸದಸ್ಯೆ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ ಹಾಗೂ ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯ ಎಚ್.ಆರ್ ಮನೋಹರ್ ಹಾಗೂ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ನವರು ಹಾಗೂ ಶಿಶು ಯೋಜನಾಧಿಕಾರಿಗಳಾದ ವಿನೋದ್ ರಾಜ್ ಹಾಗೂ ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಪದ್ಮನಾಭ, ನವೀನ್,ಸುಧಾರಾಣಿ ಲಕ್ಷ್ಮೀನಾರಾಯಣ್ ಹಾಗೂ ನಿಕಟಪೂರ್ವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ವತ್ಸಲಾ ಜಗನ್ನಾಥ್ ರವರು ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಶಾಲಾ ಮಕ್ಕಳು ಸ್ಥಳೀಯ ನಿವಾಸಿಗರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

8 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

9 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

9 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

13 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

14 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

19 hours ago