ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟ ವಿಸ್ತರಣೆ ಬೆನ್ನೆಲ್ಲೆ, ಎಲ್ಲಾ ಸಚಿವರಿಗೂ ಖಾತೆ ಹಂಚಿಕೆ ಮಾಡಿರುವ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಇದರನ್ವಯ ಮಾಧ್ಯಮ ಆರ್ಮಿ ಸುದ್ದಿ ಮಾಡಿತ್ತು, ಸದ್ಯ ಈ ಪಟ್ಟಿಯು ನಕಲಿ ಪಟ್ಟಿಯಾಗಿದ್ದು, ಶೀಘ್ರದಲ್ಲಿಯೇ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ತಿಳಿಸಿದೆ.
ನಕಲಿ ಸಚಿವ ಸ್ಥಾನ ಹಂಚಿಕೆ ಕುರಿತು ಪಟ್ಟಿ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ” ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ” ಎಂದು ತಿಳಿಸಿದೆ.