ನೂತನ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡನೆ

ಅಂತೂ ಕರ್ನಾಟಕದ ಸಿಎಂ ಆಯ್ಕೆ ವಿಚಾರವಾಗಿ ದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಕಸರತ್ತು ಅಂತ್ಯಗೊಂಡಿದೆ. ಅನೇಕ ಸುತ್ತಿನ ಸಭೆ, ಮಾತುಕತೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ದೃಢವಾದ ನಿಲುವನ್ನು ಪ್ರಕಟಿಸಿದೆ.

ಸಿದ್ದರಾಮಯ್ಯನವರು ಕರ್ನಾಟಕದ ನೂತನ ಸಿಎಂ ಮತ್ತು ಡಿಕೆ ಶಿವಕುಮಾರ್ ಅವರು ನೂತನ ಡಿಸಿಎಂ ಎಂದು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಘೋಷಿಸಿದ್ದಾರೆ.

ಇದಾದ ಬಳಿಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿ ಬಳಿಕ ರಾಜ್ಯಪಾಲರ ಬಳಿ ತೆರಳಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಶನಿವಾರದಂದು ನೂತನ ಸರ್ಕಾರದ ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆಶಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Leave a Reply

Your email address will not be published. Required fields are marked *