ನೂರು ವರ್ಷಗಳ ದೂರದೃಷ್ಟಿಯ ಯೋಜನೆಯೊಂದಿಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಆಗಬೇಕು- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಘಾಟಿ ಸುಬ್ರಮಣ್ಯ ಕ್ಷೇತ್ರ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಪುಣ್ಯ ಕ್ಷೇತ್ರವಾಗಿದ್ದು, ನೂರು ವರ್ಷಗಳ ದೂರದೃಷ್ಟಿಯ ಯೋಜನೆಯೊಂದಿಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.

ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ನೇತೃತ್ವದಲ್ಲಿ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ  ಅವರು ಮಾತನಾಡಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಷ್ಟೇ ಈ ಭಾಗವು ಅಭಿವೃದ್ಧಿಮಾಡಬೇಕು‌ ಪ್ರತಿವರ್ಷ ನಡೆಯುವ ಧನಗಳ ಜಾತ್ರೆ ವಿಶೇಷವಾಗಿದ್ದು, ನೀರಿನ ವ್ಯವಸ್ಥೆ, ಕಲ್ಯಾಣ ಮಂಟಪ, ಒಮ್ಮೆಗೆ 5 ಸಾವಿರ ಜನರು ಊಟ ಮಾಡಲು ಅನಿಕೂಲಕರವಾದ ಅನ್ನದಾಸೋಹ ಭವನ ನಿರ್ಮಾಣದ ಕುರಿತು ಸಭೆಯಲ್ಲಿ ಚರ್ಚಿಸಿದರು.

ರಸ್ತೆ ಅಗಲೀಕರಣದೊಂದಿಗೆ ಡಬಲ್ ರಸ್ತೆಯ ಅಭಿವೃದ್ಧಿ ಮಾಡಬೇಕು. ಕ್ಷೇತ್ರದ ಮೂಲಸೌಕರ್ಯಗಳ ಅಭಿವೃದ್ಧಿಯು ನೂರು ವರ್ಷಗಳಿಗೆ ಅನುಕೂಲಕರವಾದ ಯೋಜನೆಯನ್ನು ರೂಪಿಸಿ ನಿರ್ಮಾಣ ಮಾಡಬೇಕಿದೆ ಎಂದರು.

ಸಭೆಯಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್, ಬೆ.ಗ್ರಾ.ಜಿಲ್ಲಾಧಿಕಾರಿ ಎ.ಬಿ.ಬಸವರಾಜ್, ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಖಠಾರಿಯಾ, ಆಹಾರ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧಾ, ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯ ರಂಗಪ್ಪ, ಜಿಲ್ಲಾ‌ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಪ್ರಾಧಿಕಾರದ ಸದಸ್ಯ ಆರ್.ವಿ.ಮಹೇಶ್ ಕುಮಾರ್, ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅರ್ಚಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *