ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಅವರಿಗೆ ಹಸ್ತಾಂತರಿಸಿ, ಮಾತನಾಡಿದರು.
ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ ಎಂದರು.
ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಮಾತಿನ ಸಾರಾಂಶ;
ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…