“ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ”

ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಅವರಿಗೆ ಹಸ್ತಾಂತರಿಸಿ, ಮಾತನಾಡಿದರು.

ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ ಎಂದರು.

ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್‌ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ಮಾತಿನ ಸಾರಾಂಶ;
ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

1 hour ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

6 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

8 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

11 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

23 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago