ನೆಲಮಂಗಲ ಉಪವಿಭಾಗ ವ್ಯಾಪ್ತಿಯಲ್ಲಿ ಕಳ್ಳತನ, ದರೋಡೆ, ಸುಲಿಗೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರನ್ನ ಬಂಧಿಸಿ, ಬಂಧಿತರಿಂದ ವಶಪಡಿಸಿಕೊಂಡಿರುವ ವಸ್ತುಗಳನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಶಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪರಿಶೀಲಿಸಿದರು.
ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸರಹದ್ದಿನಲ್ಲಿ ದರೋಡೆ, ಮತ್ತು ಕಳ್ಳತನ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿತ ಆರೋಪಿಗಳಿಂದ 3ಲಕ್ಷ ರೂ. ಮೌಲ್ಯದ 12 ಮೊಬೈಲ್ ಫೋನ್‌ಗಳು ಮತ್ತು ನಗದು, ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳು, ಮೋಟಾರ್ ಸೈಕಲ್ ವಶಕ್ಕೆ ಪಡೆಯಲಾಗಿದೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಅವರಿಗೆ ಹೆದರಿಸಿ ಮೊಬೈಲ್ ಗಳನ್ನು ಹಾಗೂ ಹಣ ದೋಚುತ್ತಿದ್ದ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ 4 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 4 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು.
ಈ ವೇಳೆ ಭರ್ಜರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಶ್ಲಾಘನೆ ಮಾಡಲಾಯಿತು.
ಎಎಸ್ಪಿ ಪುರುಷೋತ್ತಮ್, ಎಎಸ್ಪಿ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.