ನೆಲಮಂಗಲ ಉಪವಿಭಾಗದಲ್ಲಿ ಪ್ರಾಪರ್ಟಿ ಪರೇಡ್

ನೆಲಮಂಗಲ ಉಪವಿಭಾಗ ವ್ಯಾಪ್ತಿಯಲ್ಲಿ ಕಳ್ಳತನ, ದರೋಡೆ, ಸುಲಿಗೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರನ್ನ ಬಂಧಿಸಿ, ಬಂಧಿತರಿಂದ ವಶಪಡಿಸಿಕೊಂಡಿರುವ ವಸ್ತುಗಳನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಶಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪರಿಶೀಲಿಸಿದರು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸರಹದ್ದಿನಲ್ಲಿ ದರೋಡೆ, ಮತ್ತು ಕಳ್ಳತನ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿತ ಆರೋಪಿಗಳಿಂದ 3ಲಕ್ಷ ರೂ. ಮೌಲ್ಯದ 12 ಮೊಬೈಲ್ ಫೋನ್‌ಗಳು ಮತ್ತು ನಗದು, ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳು, ಮೋಟಾರ್‌ ಸೈಕಲ್‌ ವಶಕ್ಕೆ ಪಡೆಯಲಾಗಿದೆ.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಅವರಿಗೆ ಹೆದರಿಸಿ ಮೊಬೈಲ್ ಗಳನ್ನು ಹಾಗೂ ಹಣ ದೋಚುತ್ತಿದ್ದ ಹಾಗೂ ಗಾಂಜಾವನ್ನು   ಮಾರಾಟ ಮಾಡುತ್ತಿದ್ದ 4 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 4 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು.

ಈ ವೇಳೆ ಭರ್ಜರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಶ್ಲಾಘನೆ ಮಾಡಲಾಯಿತು.

ಎಎಸ್ಪಿ ಪುರುಷೋತ್ತಮ್, ಎಎಸ್ಪಿ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

3 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

4 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

7 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

9 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

12 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

17 hours ago