Categories: Accident

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು 6 ಮಂದಿ ಸಾವು

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ಸಾವು ಕಂಡಿದ್ದಾರೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದಲೇ ಈ ಸಾವು ಸಂಭವಿಸಿದೆ ಎನ್ನಲಾಗಿದೆ.

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ  ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.

ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರಲ್ಲಿದ್ದ ದೇಹಗಳು ಕೂಡ ಛಿದ್ರವಾಗಿದೆ. KA 01 ND 1536 ಕಾರ್ ನಲ್ಲಿದ್ದ ಎಲ್ಲರೂ ಸಾವು ಕಂಡಿದ್ದಾರೆ.

ಒಟ್ಟು ಆರು ಮಂದಿ ಸಾವು ಕಂಡಿದ್ದಾರೆ ಎಂದು ತಿಳಿಸಲಾಗಿದೆ. 2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್‌ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೆರಿ ಒಟ್ಟು 6 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಮೃತರು

ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)

Ramesh Babu

Journalist

Recent Posts

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

50 minutes ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

3 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

3 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

3 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

5 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

6 hours ago