ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು.
ಕಿಲೋ ಮೀಟರ್ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ರೈತರು ವಾಪಸ್ ಆಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನು DRI ವಶಕ್ಕೆ ಪಡೆದಿದೆ.
ದಾಳಿಯ ವೇಳೆ ಗೆಜ್ಜಗದಹಳ್ಳಿಯಲ್ಲಿ 2 ಸಾವಿರ ಕೆಜಿ ಯೂರಿಯಾವನ್ನು DRI ವಶಕ್ಕೆ ಪಡೆದಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು.
ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 2500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದೀಗ ಬಯಲಾಗಿದೆ.
ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ರೈತರಿಗೆ ಇವನ್ನು ವಿತರಣೆ ಮಾಡಬೇಕು. ಹೀಗಿರುವಾಗ ಅವು ದಂಧೆಕೋರರ ಕೈಸೇರುತ್ತಿರೋದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲಿ ಈಗ ಉದ್ಭವಿಸಿದೆ.
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…