ನೆಲಮೂಲದ ಚಿಂತನೆಗಳು ದ್ರಾವಿಡ ಅಸ್ಮಿತೆಯ ಪ್ರತೀಕ-ಅಭಿಗೌಡ

ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಸೋಮವಾರ ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕನ್ನಡ ಉಪನ್ಯಾಸ ಮಾಲಿಕೆಯಲ್ಲಿ “ದ್ರಾವಿಡ ನುಡಿ ಕುಟುಂಬ ಮತ್ತು ಕನ್ನಡ ನುಡಿ” ವಿಚಾರದ ಕುರಿತು ಉಪನ್ಯಾಸ ನೀಡಿದರು.

ಮಾತೃಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುವ ದ್ರಾವಿಡ ಪರಂಪರೆಯೇ ಭಾರತದ ಸಾಂಸ್ಕೃತಿಕ ಇತಿಹಾಸದ ಅಡಿಪಾಯವಾಗಿದೆ. ಇಂದು ಒಂದು ದೇಶ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಚಿಂತನೆ ಹೆಸರಿನಲ್ಲಿ ಈ ನಾಡಿನ ವೈವಿಧ್ಯತೆಯನ್ನು ನಾಶ ಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಅಪಾಯಕಾರಿ. ಬಹುತ್ವವನ್ನು ಪ್ರತಿಪಾದಿಸುವುದೇ ಭಾರತ ಒಕ್ಕೂಟದ ಮಂತ್ರವಾಗಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಪ್ರೊ.ಚಂದ್ರಪ್ಪ ಮಾತನಾಡಿ, ಕನ್ನಡ ನಾಡು, ನುಡಿಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕ ಮೌಲ್ಯಗಳ ಬಗ್ಗೆ ಅವಲೋಕಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಪ್ರಾಂಶುಪಾಲ ಡಾ.ಆರ್.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ ಮಾತನಾಡಿದರು. ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಭಾಗ್ಯವಿಧಾತ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ದೊಡ್ಡರಂಗಪ್ಪ, ನಿವೃತ್ತ ಉಪನ್ಯಾಸಕ ಮಂಜುನಾಥಯ್ಯ, ವಿಭಾಗಗಳ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್‌, ಡಾ.ತಾವರೆನಾಯ್ಕ್‌, ಉದ್ಯೋಗಾಧಿಕಾರಿ ಬಾಬು ಸಾಬಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಉಪನ್ಯಾಸರಾದ ಅಭಿಷೇಕ್, ಉಷಾಶ್ರೀ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

4 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

14 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago