ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್-25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲ: ಸರ್ಕಾರದ ನಿರ್ಧಾರಕ್ಕೆ ನೇಕಾರರ ಶ್ಲಾಘನೆ

ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮಕ್ಕೆ 10HP ವರಗೆ ಉಚಿತ ವಿದ್ಯುತ್ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಶಕ್ತಿ ತುಂಬಿರುವ ಸರ್ಕಾರದ ತಿರ್ಮಾನದಿಂದ ರಾಜ್ಯದ 25 ಸಾವಿರ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದರು.

ಈ ಕುರಿತು ನಗರದ ಸಿನಿಮಾ ರಸ್ತೆಯಲ್ಲಿರುವ ನೇಕಾರರ ಹೋರಾಟ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರ ಸಮ್ಮಾನ್ ಯೋಜನೆಯ ಮೂಲಕ 83 ಸಾವಿರ ಜನ ನೇಕಾರರು ಮತ್ತು ನೇಕಾರ ಕಾರ್ಮಿಕರಿಗೆ ತಲಾ ಐದು ಸಾವಿರ ರೂಪಾಯಿ ಹಣವನ್ನ ಖಾತೆಗೆ ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ಅಸರೆಯಾಗಿದೆ ಎಂದರು.

2004ರಲ್ಲಿ ಅವಸಾನದ ಅಂಚಿನಲ್ಲಿದ್ದ ನೇಯ್ಗೆ ಉದ್ಯಮಕ್ಕೆ ಇದೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು, ವಿದ್ಯುತ್ ರಿಯಾಯಿತಿ ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಆಸರೆ ಆಗಿದ್ದು ಅದೇ ಸಮಯದಲ್ಲಿ. ನೇಕಾರರ ಸಾಲದ ಮೇಲಿನ ಬಡ್ಡಿ ಮನ್ನಾ, ವಸತಿ ಯೋಜನೆ, ಗುಂಪು ವಿಮಾ ಯೋಜನೆ, ನೇಕಾರ ಮಕ್ಕಳಿಗೆ 9 ರಿಂದ 12 ತರಗತಿ ಓದುವ ವಿದ್ಯಾರ್ಥಿಗಳಿಗೆ 1,200 ರೂ. ವಿದ್ಯಾರ್ಥಿವೇತನ, ಯಶಸ್ವಿನಿ ಅರೊಗ್ಯ ವಿಮಾ ಯೋಜನೆ, ಎರಡು ಮಗ್ಗ ಯೋಜನೆ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆ, ಶೇ3.ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನೇಯ್ಗೆ ಉದ್ಯಮಕ್ಕೆ ಜೀವ ತುಂಬಿದ್ದರು.

ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ಉಚಿತ ವಿದ್ಯುತ್‌ ಜಾರಿಗೆ ತರಲು ಕರ್ನಾಟಕ ರಾಜ್ಯ ನೇಕಾರ ಮಹಾ ಮಂಡಳಿಯ ಜೊತೆ ನಿಂತು ಸಹಕರಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಾದ ಎಂ ವೀರಪ್ಪ ಮೊಯ್ಲಿ ರವರು ಹಾಗು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಟಿ ವೆಂಕಟರಮಣಯ್ಯ ರವರು ಕಳೆದ ಚುನಾವಣೆಯಲ್ಲಿ ಅವರಿಗೆ ಅನ್ಯಾಯ ವಾಗಿದ್ದರೂ ಸಹ ಅವರು ಉಚಿತ ವಿದ್ಯುತ್ ಜಾರಿಗೆ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು‌ ಎಂದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago