ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ. 5000/-ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್‌ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಗಾಗಲೇ 2025-26ನೇ ಸಾಲಿನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದ ಜಿಲ್ಲೆಯ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರ ಕಾರ್ಮಿಕರು ಮತ್ತೊಮ್ಮೆ ಅರ್ಜಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಹಾಗೂ ಪ್ರಸ್ತುತ 2026-27ನೇ ಸಾಲಿನಲ್ಲಿ ಹೊಸದಾಗಿ ವಿದ್ಯುತ್ ಮಗ್ಗ ಚಟುವಟಿಕೆಯನ್ನು ಪ್ರಾರಂಭಿಸಿರುವ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರ ಕಾರ್ಮಿಕರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಜುಲೈ 10 ರೊಳಗೆ ಉಪನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿ ವಿಳಾಸಕ್ಕೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ: 080-29501945 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

5 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

6 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

18 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

19 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

19 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago