ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಅಕ್ಟೊಬರ್ 30 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…