
ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ….
ವಿನಯರಾಜ್ (26) ನೇಣಿಗೆ ಶರಣಾದ ಮೃತ ದುರ್ದೈವಿ…
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಈತ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ…
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….