ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯೊಬ್ಬರ ರಕ್ಷಣೆ: 112 ಸಹಾಯವಾಣಿ ಪೊಲೀಸರಿಗೆ ಪ್ರಶಂಸೆ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯೊಬ್ಬರನ್ನು 112 ಸಹಾಯವಾಣಿ ಪೊಲೀಸರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬಂದು ದೂರುದಾರರ ಪ್ರಾಣ ಉಳಿಸಿದ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಎಎಸ್ಪಿ-2 ನಾಗರಾಜ್ ಅವರು ಪ್ರಶಂಶಿಸಿದ್ದಾರೆ.

ERSS( ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್)-112 ಸಿಬ್ಬಂದಿಯಾದ ಅಭಿಷೇಕ್ (ಪಿಸಿ) ಹಾಗೂ  ಶಿವರಾಜ್(ಎಪಿಸಿ) ಅವರು ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಳೆಕೋಟೆ ಗ್ರಾಮಕ್ಕೆ ಹೋಗಿದ್ದರು.

ಈ ವೇಳೆ ದೂರೂರಾರರು ಮನೆಯ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಇದನ್ನು ಗಮನಿಸಿದ 112 ಸಿಬ್ಬಂದಿ ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ಮನೆಯ ಬಾಗಿಲು ಒಡೆದು ಅವರನ್ನು ರಕ್ಷಿಸಿ, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದರು.

ದೂರುದಾರ ವ್ಯಕ್ತಿಯೊಬ್ಬರಿಗೆ ಸಮಯೋಚಿತವಾಗಿ ಸ್ಪಂದಿಸಿ ಮಾನವೀಯತೆ ಮೆರೆದ ಹಾಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ಎಸ್ಪಿ‌ ಮಲ್ಲಿಕಾರ್ಜುನ ಬಾಲದಂಡಿ ಅವರು ಸನ್ಮಾನಿಸಿ ಸನ್ಮಾನಿಸಿ ಪ್ರಸಂಶನಾ ಪತ್ರ ನೀಡಿದರು.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

4 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

6 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

14 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

16 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

18 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

23 hours ago