ಎರಡು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ದಂಪತಿ. ಗಂಡ – ಹೆಂಡತಿ ಮಧ್ಯೆ ಜಗಳವಾಗಿ ಹೆಂಡತಿ ಕ್ಷಣಿಕದ ಕೋಪಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ತಾಲೂಕಿನ ತೂಬಗರೆ ಹೋಬಳಿಯ ಕಲ್ಲುಕುಂಟೆ ಗ್ರಾಮದ ಮೇಘನಾ (21) ಎಂಬಾಕೆ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದ ಅಶೋಕ್ (23) ಮಧ್ಯೆ ಪ್ರೇಮಾಂಕುರವಾಗಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಸಮುದಾಯದವರಾಗಿದ್ದರಿಂದ ಮನೆಯವರೂ ಕೂಡ ಒಪ್ಪಿ ಮದುವೆ ಮಾಡಿದ್ದರು.
ದಂಪತಿಗೆ 9 ತಿಂಗಳ ಹೆಣ್ಣು ಮಗು ಇದೆ. ರಾತ್ರಿ ಊಟದ ವಿಚಾರಕ್ಕೆ ಗಲಾಟೆಯಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ, ಜಗಳ ಉಂಟಾಗಿದೆ. ಬೆಳಕಾಗುವಷ್ಟರಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಕಾಣಿಸಿದೆ.
ಸಣ್ಣ ವಿಷಯಕ್ಕೆ ಇಂತಹ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡಿದ್ದಾಳೆ ಎಂದು ಮೃತಳ ಗಂಡ ಅಶೋಕ್ ಹೇಳಿದ್ದಾರೆ. ಮೃತ ಮೇಘನಾ ಕುಟುಂಬಸ್ಥರು ಅಶೋಕ್ ಕುಟುಂಬದ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾಳೆ ಎಂಬ ಖಚಿತ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…