ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ಸಫ್ರೀನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನೇಣಿನ ಕುಣಿಕೆಯಿಂದ ಬಿಡಿಸಿ ಸ್ವತಃ ಪತಿ ನಜೀರ್ ಸಫ್ರೀನಾಳನ್ನು ನಾಪೋಕ್ಲು ವಿನ ಖಾಸಗಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದುಮೃತ ಸಫ್ರೀನ ದೇಹದಲ್ಲಿ ಗಾಯಗಳ ಗುರುತು ಇದ್ದು ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಸಫ್ರಿನ ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಫ್ರೀನ ಸಹೋದರ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…