ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.
ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.
ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.
ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಉತ್ತರಿಸಲಿ. ಕರ್ನಾಟಕದ ಜನರನ್ನು ದಿಕ್ಕುತಪ್ಪಿಸುವ ರಾಜಕೀಯವನ್ನು ನಿಲ್ಲಿಸಲಿ ಎಂದು…
ಕೇಂದ್ರ ಸರ್ಕಾರವು ಮೊಬೈಲ್ ಮೂಲಕ ರೈತರು ಎಲ್ಲಾ ರಸಗೊಬ್ಬರಗಳನ್ನು ಮುಂಗಡವಾಗಿ ಕಾಯ್ದಿರಿಸಿ ಖರೀದಿಸುವ ನೂತನ " ಫರ್ಟಿಲೈಸರ್ ಸೇಲ್ ಅಪಿಕೇಶನ್…
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಸೆರೆಹಿಡಿದ ಆನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗಕ್ಕೆ ಸ್ಥಳಾಂತರಿಸುವ ಅರಣ್ಯ ಇಲಾಖೆಯ ನಿರ್ಧಾರಕ್ಕೆ ತೀವ್ರ ವಿರೋಧ…
ರಾಜ್ಯದ ಹಳೆಯ ಕಾಲುವೆಗಳ ಆಧುನೀಕರಣ, ನೀರಿನ ಸೋರಿಕೆ ತಡೆಗಟ್ಟುವಿಕೆ ಹಾಗೂ ಕೃಷಿ ನೀರಾವರಿ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ…
ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ........ ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಕಾಡನೂರು ಕೈಮರ ಸಮೀಪದ ಆಂಜನಮೂರ್ತಿ ನಗರ ಬಳಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ…