ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ ಪ್ರವೇಶಿಸಿ ಸೀರೆ ಉತ್ಪಾದನ ವೆಚ್ಚಕ್ಕೆ ಅನುಗುಣವಾಗಿ ಸೀರೆ ಬೆಲೆ ಹೆಚ್ಚಿಸಬೇಕು, ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ನೇಕಾರ ಹೋರಾಟ ಸಮಿತಿ ಅಧ್ಯಕ್ಷ ಹೇಮಂತ್ ರಾಜು ಅಗ್ರಹಿಸಿದರು.
ನೇಕಾರ ಹೋರಾಟ ಸಮಿತಿ ವತಿಯಿಂದ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ಸೋಮವಾರ ನೇಯ್ಗೆ ಉದ್ಯಮದ ಕಚ್ಚ ಸಾಮಗ್ರಿಗಳ ಬೆಲೆ ಏರಿಕೆ ಖಂಡಿಸಿ ಮತ್ತು ಸೀರೆ ಉತ್ಪಾದನ ವೆಚ್ಚಕ್ಕೆ ಅನುಗುಣವಾಗಿ ಸೀರೆಗಳ ಬೆಲೆ ಹೆಚ್ಚಿಸಬೇಕೆಂದು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ನೇಕಾರಿಕೆ ನಂಬಿ ಜೀವನ ಸಾಗಿಸುತ್ತಿದ್ದು ಇಲ್ಲಿಯವರೆಗೂ ಸೂಕ್ತ ಮಾರುಕಟ್ಟೆ ಇಲ್ಲವಾಗಿದೆ. ಈಗ ಬೆಲೆ ಏರಿಕೆ ನೇಕಾರರನ್ನು ಮತ್ತಷ್ಟು ಸಂಕಷ್ಟಕ್ಕೀಡುಮಾಡಿದೆ. ನೇಕಾರರನ್ನು ಸರ್ಕಾರ ಪರಿಗಣಿಸುತ್ತಿಲ್ಲ ನಮ್ಮ ಕಷ್ಟ ಕೇಳುವವರಿಲ್ಲ, ನಮಗೂ ಜೀವಿಸುವ ಹಕ್ಕಿದೆ ನೇಕಾರಿಕೆ ಮಾಡಲು ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಇಳಿಸಿ ನಮ್ಮ ಕಷ್ಟಕ್ಕೆ ಸೂಕ್ತ ಬೆಲೆ ನಿಗದಿ ಮಾಡಿ ನೇಕಾರರನ್ನು ಉಳಿಸಿ ಎಂದರು.
ತಾಲ್ಲೂಕಿನ ನೇಕಾರರಿಗೆ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಎಚ್ಚರಿಸುವ ಸಲುವಾಗಿ ಇಂದು ಸಾಂಕೇತಿಕ ಪ್ರತಿಭಟನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಇಂದೇ ನಾವೆಲ್ಲರೂ ಎಚ್ಚೆದ್ದುಕೊಳ್ಳಬೇಕು ನೇಕಾರಿಕೆ ನಂಬಿ ಜೀವನ ಸಾಗಿಸುತ್ತಿರುವ ಪ್ರತಿ ಮಾಲೀಕ, ಕಾರ್ಮಿಕರು ಒಂದಾಗಬೇಕು ಎಂದು ಮುಖಂಡ ಹೇಮಂತ್ ರಾಜು ತಿಳಿಸಿದರು.
ಪ್ರತಿಭಟನಾಕಾರರು ಈ ವೇಳೆ ನೇಕಾರರ ಸಮಸ್ಯೆಯನ್ನು ಬಗೆಹರಿಸುವಂತೆ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ನೇಕಾರ ಮುಖಂಡ ಪಿ.ಸಿ ವೆಂಕಟೇಶ್ , ಬೆಂಗಳೂರು ಟೆಕ್ಸಟೈಲ್ ಬ್ಯಾಂಕ್ ಅಧ್ಯಕ್ಷ ವೆಂಕಟರಮಣಯ್ಯ, ನೇಕಾರ ಮಹಾಮಂಡಳಿ ಅಧ್ಯಕ್ಷ ಪಿ. ಸಿ.ವೆಂಕಟೇಶ, ಜಂಟಿ ಕಾರ್ಯದರ್ಶಿ ಅಮರನಾಥ್, ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ ವೆಂಕಟೇಶ್, ದೊಡ್ಡಬಳ್ಳಾಪುರ ವೀವರ್ಸ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ, ಹೋರಾಟ ಸಮಿತಿಯ ಮಲ್ಲೇಶ್ ಸೇರಿದಂತೆ ಹಲವರು ಇದ್ದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…