ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೊಂದಾಯಿತ ಆಲ್ ಇಂಡಿಯಾ ಜನರಕ್ಷಾ ಪಾರ್ಟಿ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಅಖಿಲ ಭಾರತ ಜನರಕ್ಷಾ ಪಕ್ಷವು ರಾಜಕೀಯ ಪಕ್ಷವಾಗಿ ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದು ಆಯೋಗದ ದಾಖಲೆಗಳ ಪ್ರಕಾರ ಅಖಿಲ ಭಾರತ ಜನರಕ್ಷಾ ಪಕ್ಷವು ಮೂರು ವರ್ಷಗಳಿಂದ ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ನಮೂನೆ ಪತ್ರದ ಮೂಲಕ ಸಲ್ಲಿಸಿರುವುದಿಲ್ಲ.
ನೋಂದಾಯಿತ ಮಾನ್ಯತೆಯನ್ನು ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ನಿಬಂಧನೆಗಳ ಅಡಿಯಲ್ಲಿ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಮಾಡಿದೆ.
ನೋಟಿಸ್ ನ ಅನುಸಾರ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್‌ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅಕ್ಟೋಬರ್ 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು. ಹಾಗೇ ಪಕ್ಷದ ವಿಚಾರಣೆಯು ಅದೇ ದಿನದಂದು ನಿಗದಿಪಡಿಸಿದ್ದು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರು ಕಡ್ಡಾಯವಾಗಿ ಹಾಜರಿರಲು ಚುನಾವಣಾ ಆಯೋಗವು ತಿಳಿಸಿದೆ.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…