ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಕ್ಕೆ ಚುನಾವಣೆ ಆಯೋಗದಿಂದ ನೋಟಿಸ್ ಜಾರಿ

ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೊಂದಾಯಿತ ಆಲ್ ಇಂಡಿಯಾ ಜನರಕ್ಷಾ ಪಾರ್ಟಿ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಅಖಿಲ ಭಾರತ ಜನರಕ್ಷಾ ಪಕ್ಷವು ರಾಜಕೀಯ ಪಕ್ಷವಾಗಿ ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದು ಆಯೋಗದ ದಾಖಲೆಗಳ ಪ್ರಕಾರ ಅಖಿಲ ಭಾರತ ಜನರಕ್ಷಾ ಪಕ್ಷವು ಮೂರು ವರ್ಷಗಳಿಂದ ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ನಮೂನೆ ಪತ್ರದ ಮೂಲಕ ಸಲ್ಲಿಸಿರುವುದಿಲ್ಲ.

ನೋಂದಾಯಿತ ಮಾನ್ಯತೆಯನ್ನು ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ನಿಬಂಧನೆಗಳ ಅಡಿಯಲ್ಲಿ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಮಾಡಿದೆ.

ನೋಟಿಸ್ ನ ಅನುಸಾರ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್‌ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅಕ್ಟೋಬರ್ 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು. ಹಾಗೇ ಪಕ್ಷದ ವಿಚಾರಣೆಯು ಅದೇ ದಿನದಂದು ನಿಗದಿಪಡಿಸಿದ್ದು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರು ಕಡ್ಡಾಯವಾಗಿ ಹಾಜರಿರಲು ಚುನಾವಣಾ ಆಯೋಗವು ತಿಳಿಸಿದೆ.

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

24 minutes ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

3 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

14 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

21 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago