ನೋಂದಾಯಿತ ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಂದ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಲಾಗುವುದು.

ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟು ಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು, ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮುಖಾಂತರ ನವೆಂಬರ್ 14 ರಿಂದ ಡಿಸೆಂಬರ್ 13 ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್‌ ಹಾಗೂ ಇಲಾಖೆಯ ವೆಬ್ ಸೈಟ್ www.kannadasiri.karnataka.gov.in ನಲ್ಲಿ ಮಾರ್ಗಸೂಚಿಯನ್ನು ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 080 22279954, 9986837037, 8792662814, 8792662816, 08022213530 ದೂರವಾಣಿ ಸಂಖ್ಯೆಯನ್ನು ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *