Categories: ಕೋಲಾರ

ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿಗೆ ಕೋಲಾರದಲ್ಲಿ ಜ.27 ರಂದು ಅಭಿನಂದನೆ: ಜಿಲ್ಲಾ ಸರ್ಕಾರಿ ನೌಕರರು ಭಾಗವಹಿಸಲು ಅಧ್ಯಕ್ಷ ಅಜಯ್‌ಕುಮಾರ್ ಕರೆ

ಕೋಲಾರ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿಗೆ ಕೋಲಾರದಲ್ಲಿ ಜ.27 ರಂದು ಸೋಮವಾರ ಅಭಿನಂದನೆ ಹಾಗೂ ಉತ್ತಮ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಳ್ಳಲಾಗಿದೆ.

ಎರಡನೇ ಬಾರಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ರಾಜ್ಯದ ನೂತನ ಪದಾಧಿಕಾರಿಗಳಿಗೆ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಅಜಯ್‌ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿಪುಲೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಅಧ್ಯಕ್ಷ ಸಿಎಸ್.ಷಡಕ್ಷರಿ ಅವರನ್ನು ನಗರದ ಮೆಕ್ಕೆ ವೃತ್ತದಿಂದ ಡೊಳ್ಳು ಕುಣಿತದ ಮೂಲಕ ಮೆರವಣಿಗೆಯಲ್ಲಿ ಕಾರ್ಯಕ್ರಮದ ವೇದಿಕೆಗೆ ಕರೆತರಲಾಗುವುದು. ನೂತನ ರಾಜ್ಯಾಧ್ಯಕ್ಷರನ್ನು ಅದ್ದೂರಿಯಾಗಿ ಸ್ವಾಗತಿಸುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಜಿಲ್ಲೆಯ ವೃಂದ ಸಂಘಗಳ ಪದಾಧಿಕಾರಿಗಳು ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ, ಖಜಾಂಚಿ ವಿ.ವಿ.ಶಿವರುದ್ರಯ್ಯ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಗೌರವಾಧ್ಯಕ್ಷ ಎಸ್.ಬಸವರಾಜು, ಹಿರಿಯ ಉಪಾಧ್ಯಕ್ಷ ನಾಗರಾಜ ಆರ್.ಜುಮ್ಮನ್ನ ಭಾಗವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಬಂಧುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಎ.ಅಜಯ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

13 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

37 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

3 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago