ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ, ಎಲ್ಲಾ ದಿನಗಳು ಬೆಳಗ್ಗೆ 7 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಬೇಕಾಗಿರುತ್ತದೆ. ಮಾಹೆಯ ಕೊನೆಯವರೆಗೂ ಪಡಿತರ ವಿತರಣೆಮಾಡಬೇಕಾಗಿರುತ್ತದೆ.
ಒಂದು ವೇಳೆ ತಾಲ್ಲೂಕುಗಳಲ್ಲಿ ಈ ಬಗ್ಗೆ ಅಂದರೆ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಕಾರ್ಯನಿರ್ವಹಿಸದೇ ಇದ್ದಲ್ಲಿ ದೇವನಹಳ್ಳಿ ತಾಲ್ಲೂಕು ಆಹಾರ ಶಿರಸ್ತೇದಾರ್ ಶ್ರೀಧರ್.ಎನ್(9945724948), ದೇವನಹಳ್ಳಿ ತಾಲ್ಲೂಕು ಆಹಾರ ನಿರೀಕ್ಷಕರು ಕೆ.ಶ್ಯಾಮ್‌ಪ್ರಸಾದ್(9448376570), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಶಿರಸ್ತೇದಾರ್ ಶಶಿಕಲಾ.ಈ(9110672505), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ನಿರೀಕ್ಷಕರು ರಾಜು ಸಬಸ್ಟೀನ್(9945275227), ಹೊಸಕೋಟೆ ತಾಲ್ಲೂಕು ಆಹಾರ ಶಿರಸ್ತೇದಾರ್ ವಿ ನಟರಾಜ್ ರೆಡ್ಡಿ(9902294444), ಹೊಸಕೋಟೆ ತಾಲ್ಲೂಕು ಆಹಾರ ನಿರೀಕ್ಷಕರು ಬಿ.ಶಿವಕುಮಾರ್(9902805563), ನೆಲಮಂಗಲ ತಾಲ್ಲೂಕು ಆಹಾರ ಶಿರಸ್ತೇದಾರ್ ಕೃಷ್ಣಮೂರ್ತಿ(8660184016), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಜಯಕುಮಾರ್(9886781111), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಸೈಯದ್ ಅಮಾನುಲ್ಲಾ(9036434552)ತಾಲ್ಲೂಕು ಆಹಾರ ಶಾಖೆ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…