ನ್ಯಾಯಬೆಲೆ ಅಂಗಡಿಗಳು ರಜಾದಿನ ಹೊರತುಪಡಿಸಿ ಉಳಿದ ದಿನಗಳು ತೆರೆದಿರುವುದು ಕಡ್ಡಾಯ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ, ಎಲ್ಲಾ ದಿನಗಳು ಬೆಳಗ್ಗೆ 7 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಬೇಕಾಗಿರುತ್ತದೆ. ಮಾಹೆಯ ಕೊನೆಯವರೆಗೂ ಪಡಿತರ ವಿತರಣೆಮಾಡಬೇಕಾಗಿರುತ್ತದೆ.

ಒಂದು ವೇಳೆ ತಾಲ್ಲೂಕುಗಳಲ್ಲಿ ಈ ಬಗ್ಗೆ ಅಂದರೆ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಕಾರ್ಯನಿರ್ವಹಿಸದೇ ಇದ್ದಲ್ಲಿ ದೇವನಹಳ್ಳಿ ತಾಲ್ಲೂಕು ಆಹಾರ ಶಿರಸ್ತೇದಾರ್ ಶ್ರೀಧರ್.ಎನ್(9945724948), ದೇವನಹಳ್ಳಿ ತಾಲ್ಲೂಕು ಆಹಾರ ನಿರೀಕ್ಷಕರು ಕೆ.ಶ್ಯಾಮ್‌ಪ್ರಸಾದ್(9448376570), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಶಿರಸ್ತೇದಾರ್ ಶಶಿಕಲಾ.ಈ(9110672505), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ನಿರೀಕ್ಷಕರು ರಾಜು ಸಬಸ್ಟೀನ್(9945275227), ಹೊಸಕೋಟೆ ತಾಲ್ಲೂಕು ಆಹಾರ ಶಿರಸ್ತೇದಾರ್ ವಿ ನಟರಾಜ್ ರೆಡ್ಡಿ(9902294444), ಹೊಸಕೋಟೆ ತಾಲ್ಲೂಕು ಆಹಾರ ನಿರೀಕ್ಷಕರು ಬಿ.ಶಿವಕುಮಾರ್(9902805563), ನೆಲಮಂಗಲ ತಾಲ್ಲೂಕು ಆಹಾರ ಶಿರಸ್ತೇದಾರ್ ಕೃಷ್ಣಮೂರ್ತಿ(8660184016), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಜಯಕುಮಾರ್(9886781111), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಸೈಯದ್ ಅಮಾನುಲ್ಲಾ(9036434552)ತಾಲ್ಲೂಕು ಆಹಾರ ಶಾಖೆ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago