
ಕೋಲಾರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತದ ದಾಳಿಯು ಸಂವಿಧಾನಕ್ಕೆ ಮಾಡಿರುವ ಅವಮಾನವಾಗಿದೆ ಮುಖ್ಯನ್ಯಾಯಮೂರ್ತಿಗಳಿಗೆ ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಪಕ್ಷದ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯ ಮಾಡಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಸುಪ್ರೀಂ ಕೋರ್ಟ್‌ನಲ್ಲಿಯೇ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ದಾಳಿ ನಡೆದಿದೆ ಎಂದರೆ ಸಮಾಜ ಯಾವ ದಿಕ್ಕಿನಲ್ಲಿ ಹೋಗುತ್ತಾ ಇದೆ ಯೋಚನೆ ಮಾಡಬೇಕಾದ ಸಂದರ್ಭ ಬಂದಿದೆ ಪ್ರತಿಯೊಬ್ಬ ಭಾರತೀಯರು ಅವರ ಜೊತೆ ನಿಲ್ಲಬೇಕು ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಮಾಜಿಕ ಕಳಕಳಿಯ ನ್ಯಾಯಮೂರ್ತಿಗಳಾಗಿ ದೇಶಾದ್ಯಂತ ಗುರುತಿಸಿಕೊಂಡಿದ್ದಾರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಗೆ ವಕೀಲ ದ್ರೋಹ ಬಗೆದಿದ್ದಾನೆ ಎಂದು ಆರೋಪಿಸಿದರು
ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಬೇಧವಿಲ್ಲದವರು ದೇಶದಲ್ಲಿ ಎಲ್ಲಾ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮದಿಂದ ದೇಶದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಘಟನೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಈ ಕೃತ್ಯವನ್ನು ಎಸಗಿದ ವಕೀಲನ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ನ್ಯಾಯಾಂಗ ವ್ಯವಸ್ಥೆಯ ಗೌರವವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ.