ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ಶೂ ಎಸೆತ ವಿಚಾರ: ವಕೀಲ ಆರ್.ವಿ.ಮಹೇಶ್ ಕುಮಾರ್ ಖಂಡನೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ವಕೀಲ ಆರ್.ವಿ.ಮಹೇಶ್ ಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿದ ವಕೀಲ ಆರ್.ವಿ.ಮಹೇಶ್ ಕುಮಾರ್, ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ. ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗಲೇ ನಮ್ಮ ದೇಶದ ಸಂವಿಧಾನವನ್ನು ಈ ಸನಾತನವಾದಿಗಳು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ಕೊಡುವುದನ್ನು ಈ ಸನಾತನವಾದಿಗಳು ಯಾವೊತ್ತು ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಈ ದಾಳಿಯ ಹಿಂದಿನ ಸನಾತನವಾದಿಗಳ ಹುನ್ನಾರವನ್ನು ಕೇಂದ್ರ ಸರ್ಕಾರ ಬಯಲಿಗೆಳೆಯಬೇಕೆಂದು ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿಯೇ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ದಾಳಿ ನಡೆದಿದೆ ಎಂದರೆ  ಸಮಾಜ ಯಾವ ದಿಕ್ಕಿನಲ್ಲಿ ಹೋಗುತ್ತಾ ಇದೆ ಯೋಚನೆ ಮಾಡಬೇಕಾದ ಸಂದರ್ಭ ಬಂದಿದೆ ಪ್ರತಿಯೊಬ್ಬ ಭಾರತೀಯರು ಅವರ ಜೊತೆ ನಿಲ್ಲಬೇಕು ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಕಳಕಳಿಯ ನ್ಯಾಯಮೂರ್ತಿಗಳಾಗಿ ದೇಶಾದ್ಯಂತ ಗುರುತಿಸಿಕೊಂಡಿದ್ದಾರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಗೆ ವಕೀಲ ದ್ರೋಹ ಬಗೆದಿದ್ದಾನೆ ಎಂದು ಆರೋಪಿಸಿದರು.

ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು  ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಬೇಧವಿಲ್ಲದವರು ದೇಶದಲ್ಲಿ ಎಲ್ಲಾ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ  ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮದಿಂದ ದೇಶದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಘಟನೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

8 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

9 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

11 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

15 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

16 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

16 hours ago