ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ವಕೀಲ ಆರ್.ವಿ.ಮಹೇಶ್ ಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಮಾತನಾಡಿದ ವಕೀಲ ಆರ್.ವಿ.ಮಹೇಶ್ ಕುಮಾರ್, ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ. ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗಲೇ ನಮ್ಮ ದೇಶದ ಸಂವಿಧಾನವನ್ನು ಈ ಸನಾತನವಾದಿಗಳು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ಕೊಡುವುದನ್ನು ಈ ಸನಾತನವಾದಿಗಳು ಯಾವೊತ್ತು ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಈ ದಾಳಿಯ ಹಿಂದಿನ ಸನಾತನವಾದಿಗಳ ಹುನ್ನಾರವನ್ನು ಕೇಂದ್ರ ಸರ್ಕಾರ ಬಯಲಿಗೆಳೆಯಬೇಕೆಂದು ಒತ್ತಾಯಿಸಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿಯೇ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ದಾಳಿ ನಡೆದಿದೆ ಎಂದರೆ ಸಮಾಜ ಯಾವ ದಿಕ್ಕಿನಲ್ಲಿ ಹೋಗುತ್ತಾ ಇದೆ ಯೋಚನೆ ಮಾಡಬೇಕಾದ ಸಂದರ್ಭ ಬಂದಿದೆ ಪ್ರತಿಯೊಬ್ಬ ಭಾರತೀಯರು ಅವರ ಜೊತೆ ನಿಲ್ಲಬೇಕು ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಕಳಕಳಿಯ ನ್ಯಾಯಮೂರ್ತಿಗಳಾಗಿ ದೇಶಾದ್ಯಂತ ಗುರುತಿಸಿಕೊಂಡಿದ್ದಾರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಗೆ ವಕೀಲ ದ್ರೋಹ ಬಗೆದಿದ್ದಾನೆ ಎಂದು ಆರೋಪಿಸಿದರು.
ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಬೇಧವಿಲ್ಲದವರು ದೇಶದಲ್ಲಿ ಎಲ್ಲಾ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮದಿಂದ ದೇಶದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಘಟನೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಎಂದರು.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…