Categories: ಕೋಲಾರ

ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ಶೂ ಎಸೆತ ಖಂಡನೀಯ: ಕಾನೂನು ಕ್ರಮಕ್ಕೆ ಒತ್ತಾಯ

ಕೋಲಾರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತದ ದಾಳಿಯು ಸಂವಿಧಾನಕ್ಕೆ ಮಾಡಿರುವ ಅವಮಾನವಾಗಿದೆ ಮುಖ್ಯನ್ಯಾಯಮೂರ್ತಿಗಳಿಗೆ ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಪಕ್ಷದ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಸುಪ್ರೀಂ ಕೋರ್ಟ್‌ನಲ್ಲಿಯೇ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ದಾಳಿ ನಡೆದಿದೆ ಎಂದರೆ ಸಮಾಜ ಯಾವ ದಿಕ್ಕಿನಲ್ಲಿ ಹೋಗುತ್ತಾ ಇದೆ ಯೋಚನೆ ಮಾಡಬೇಕಾದ ಸಂದರ್ಭ ಬಂದಿದೆ ಪ್ರತಿಯೊಬ್ಬ ಭಾರತೀಯರು ಅವರ ಜೊತೆ ನಿಲ್ಲಬೇಕು ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಮಾಜಿಕ ಕಳಕಳಿಯ ನ್ಯಾಯಮೂರ್ತಿಗಳಾಗಿ ದೇಶಾದ್ಯಂತ ಗುರುತಿಸಿಕೊಂಡಿದ್ದಾರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಗೆ ವಕೀಲ ದ್ರೋಹ ಬಗೆದಿದ್ದಾನೆ ಎಂದು ಆರೋಪಿಸಿದರು

ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಬೇಧವಿಲ್ಲದವರು ದೇಶದಲ್ಲಿ ಎಲ್ಲಾ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮದಿಂದ ದೇಶದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಘಟನೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಈ ಕೃತ್ಯವನ್ನು ಎಸಗಿದ ವಕೀಲನ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ನ್ಯಾಯಾಂಗ ವ್ಯವಸ್ಥೆಯ ಗೌರವವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

4 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

9 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

11 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

14 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago