ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾರರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಪೌರಾಯುಕ್ತ ಶಿವಶಂಕರ್ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಬಸ್ ನಿಲ್ದಾಣ ಬಳಿ ಮತದಾನ ಜಾಗೃತಿ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿ ಮಾತನಾಡಿದರು. ದೇಶದ ಭವಿಷ್ಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದರು.
ಯಾವುದೇ ಆಮಿಷ, ಆಸೆ, ಹಣಕ್ಕೆ ಮಾರಾಟ ಮಾಡದೇ ನ್ಯಾಯಸಮ್ಮತವಾಗಿ, ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಕಂದಾಯ ನಿರೀಕ್ಷಕ ಗಿರೀಶ್, ವ್ಯವಸ್ಥಾಪಕ ಆಂಜನೇಯಲು, ಸೇರಿದಂತೆ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.