ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗಾಗಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ (ಪ್ರವರ್ಗ-1, 2ಎ, 3ಎ ಮತ್ತು 3ಬಿ) ಕಾನೂನು ಪಧವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಈ ಕಛೇರಿಯಲ್ಲಿ ನಿಗದಿತ ಅವಧಿಯೊಳಗೆ ಕಛೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಲಾದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿಗೆ ಅಕ್ಟೋಬರ್ 04 ರೊಳಗೆ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ನಿಬಂಧನೆಗಳು*
1. ಅಭ್ಯರ್ಥಿಯು ಕಾನೂನು ಪದವೀಧರರಾಗಿದ್ದು ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿಯನ್ನು ಮುಗಿಸಿ 2 (ಎರಡು) ವರ್ಷಗಳು ಮೀರಿರಬಾರದು.
2. ಅಭ್ಯರ್ಥಿಗಳು ಸರ್ಕಾರದ ಆದೇಶ ಸಂಖ್ಯೆ: ಎಸ್.ಡಬ್ಲ್ಯೂ.ಡಿ 225, ಬಿ.ಸಿ.ಎ 2000, ದಿನಾಂಕ, 30.03.2002 ರ ಆದೇಶದ ಅನುಸಾರ ಹಿಂದುಳಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗೀಕರಣಕ್ಕೆ ಒಳಪಟ್ಟಿರಬೇಕು ಹಾಗೂ ಮೇಲ್ಕಂಡ ವರ್ಗಗಳಿಗೆ ನಿಗದಿಪಡಿಸಲಾದ ಜಾತಿ ಆದಾಯ ಪ್ರಮಾಣ ಪತ್ರಗಳೊಂದಿಗೆ ವಿವರಗಳನ್ನು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
3. ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ. 3.50ಲಕ್ಷ ಹಾಗೂ ಪ್ರವರ್ಗ 2 (ಎ), 3 (ಎ) ಅಥವಾ 3 (ಬಿ) ಅಭ್ಯರ್ಥಿಗಳಿಗೆ ರೂ. 2.50 ಲಕ್ಷಗಳ ಮಿತಿ ಇರಬೇಕು.
4. ಭರ್ತಿ ಮಾಡಲಾದ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು ಪ್ರವರ್ಗ-1ಕ್ಕೆ 40 ವರ್ಷ ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ 38 ವರ್ಷಗಳನ್ನು ಮೀರಿರಬಾರದು.
5. ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ತರಬೇತಿ ಅವಧಿ ಇದ್ದು, ಈ ಅವಧಿಯೊಳಗೆ ತರಬೇತಿಯನ್ನು ಬಿಡಲು ಅವಕಾಶವಿರುವುದಿಲ್ಲ ಹಾಗೂ ಅಭ್ಯರ್ಥಿಯು ಸುಳ್ಳು ಮಾಹಿತಿ ನೀಡಿದಲ್ಲಿ ಅಥವಾ ತರಬೇತಿ ಅವಧಿಯ ಮಧ್ಯದಲ್ಲಿ ತರಬೇತಿಯಿಂದ ಬಿಟ್ಟು ಹೋದಲ್ಲಿ ಸರ್ಕಾರ ಅವರಿಗಾಗಿ ಖರ್ಚು ಮಾಡಿದ ಹಣವನ್ನು ವರ್ಷಕ್ಕೆ ಶೇ.10 ರ ಬಡ್ಡಿಯೊಂದಿಗೆ ಭೂ ಕಂದಾಯದ ಬಾಕಿ ಎಂದು ಪರಿಗಣಿಸಿ ವಸೂಲು ಮಾಡಲಾಗುವುದು. ಆದರೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ.
6. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ. 4,000/- ಗಳ ತರಬೇತಿ ಭತ್ಯೆಯನ್ನು ದಿನಚರಿ ಆಧಾರದ ಮೇರೆಗೆ ನೀಡಲಾಗುವುದು.
7. ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ /ಸರ್ಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ವರ್ಷಗಳು ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಕೀಲರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನು ತರಬೇತಿ ಪಡೆಯುವ ಸಲುವಾಗಿ ತರಬೇತಿಗೆ ನಿಯೋಜಿಸಲಾಗುವುದು.
8. ಆಯ್ಕೆಯಾದ ಅಭ್ಯರ್ಥಿಯು ಈ ಇಲಾಖೆಯ ನಿಬಂಧನೆಗಳು ಹಾಗೂ ಕಾಲಕಾಲಕ್ಕೆ ಹೊಂದಿರುವ ಸರ್ಕಾರದ ಆದೇಶಗಳಿಗೆ ಬದ್ಧನಾಗಿರುತ್ತೇನೆಂದು ಮುಚ್ಚಳಿಕೆಯನ್ನು ಬರೆದು ಕೊಡಬೇಕು.
9. ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು, ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇವರ ಕಛೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದು.
10. ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯ ಸಂದರ್ಶನದ ದಿನಾಂಕ ಹಾಗೂ ಸ್ಥಳವನ್ನು ತಿಳಿಸಿದಾಗ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
11. ಅಭ್ಯರ್ಥಿಗಳು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳ ದೃಢೀಕರಣ ಪ್ರತಿ ಹಾಗೂ ಜನ್ಮ ದಿನಾಂಕದ ಆಧಾರಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಟಿ.ಸಿ ದೃಢೀಕೃತ ಪ್ರತಿಯನ್ನು ಲಗತ್ತಿಸಬೇಕು.
12. ಅರ್ಜಿಗಳನ್ನು ಸ್ವೀಕರಿಸಲು ಅಕ್ಟೊಬರ್ 04 ಕೊನೆದಿನವಾಗಿದೆ.

Ramesh Babu

Journalist

Recent Posts

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

4 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

5 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

16 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

16 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

16 hours ago