ನ್ಯಾಯಾಲಯದಲ್ಲಿ ಶಿಸ್ತು ಪಾಲನೆ ಕಡ್ಡಾಯ: ಕೋರ್ಟ್ ಆವರಣದಲ್ಲಿ ಅಡ್ಡಾದಿಡ್ಡಿ ಪಾರ್ಕ್ ಮಾಡಿದ್ದ ವಾಹನಗಳ ಜಪ್ತಿ, ದಂಡ

ದೊಡ್ಡಬಳ್ಳಾಪುರ ಕೋರ್ಟ್ ಆವರಣದಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದಲ್ಲದೇ ದಂಡ ಕೂಡ ವಿಧಿಸಿದರು.

ನ್ಯಾಯಾಧೀಶರ ಸೂಚನೆ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಜಪ್ತಿ ಮಾಡಿ ಕೆಲವೊಂದು ವಾಹನಗಳ ಮಾಲೀಕರಿಗೆ ದಂಡ ಕೂಡ ವಿಧಿಸಿದರು.

ಇನ್ನು ಮುಂದೆ ನಿಗದಿತ ವಾಹನ ನಿಲುಗಡೆ ಸ್ಥಳದಲ್ಲಿ ಮಾತ್ರ ವಾಹನಗಳನ್ನು ಪಾರ್ಕ್ ಮಾಡುವಂತೆ ಎಚ್ಚರಿಸಿದರು.

ನ್ಯಾಯಾಲಯದ ಒಳಗಡೆ ಪ್ರವೇಶಿಸುವ ಮುನ್ನ ಸಾರ್ವಜನಿಕರು ಕೆಲವೊಂದು ಶಿಸ್ತುಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇ ಬೇಕಾಗಿರುತ್ತದೆ. ಸಾರ್ವಜನಿಕರು ತಮ್ಮ ಮೊಬೈಲ್ ಗಳನ್ನು ಸೈಲೆಂಟ್ ಅಥವಾ ಸ್ವೀಚ್ ಆಫ್ ಮಾಡತಕ್ಕದು. ನ್ಯಾಯಾಲಯದ ಆವರಣದಲ್ಲಿ ತಂಬಾಕು ಹಾಗೂ ಧೂಮಪಾನ ಮಾಡಬಾರದು. ಸಾರ್ವಜನಿಕರು ನ್ಯಾಯಾಲಯವನ್ನು ದೇವಾಲಯದಂತೆ ಪರಿಗಣಿಸಿ ಶಿಸ್ತಿನಿಂದ ವರ್ತಿಸುವುದು…  ನ್ಯಾಯಾಲಯ ಕಲಾಪ ನಡೆಯುತ್ತಿರುವಾಗ ನಿಶ್ಯಬ್ಧವಾಗಿರುವುದು. ನ್ಯಾಯಾಲಯದ ಒಳಭಾಗದಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ನಿಂತು ಮಾತನಾಡಬಾರದು. ನ್ಯಾಯಾಲಯ ಒಳಂಗಣದಲ್ಲಿ ಉಗುಳುವುದು.. ಪ್ಲಾಸ್ಟಿಕ್ ಬಾಟಲ್ ಗಗಳನ್ನು ಹಾಕದೆ ಸ್ವಚ್ಛತೆ ಕಾಪಾಡುವುದು.. ನ್ಯಾಯಾಲಯದಲ್ಲಿನ ಶೌಚಲಯವನ್ನು ಸ್ವಚ್ಛತೆಯಿಂದಿಡುವುದು.. ಕಕ್ಷಿದಾರರು ವಕೀಲರೊಂದಿಗೆ ಸೌಜನ್ಯದಿಂದ ವರ್ತಿಸುವುದು… ಸೇರಿದಂತೆ ಇತರೆ  ಶಿಸ್ತುಗಳನ್ನು ಪಾಲನೆ ಮಾಡಬೇಕು….

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago