ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ದೊಡ್ಡಬಳ್ಳಾಪುರ ನ್ಯಾಯಾಲಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ನಿರ್ಮಲಾ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಗಿಡಮರಗಳನ್ನು ಪೋಷಿಸುವುದರೊಂದಿಗೆ ಪರಿಸರ ಮಾಲಿನ್ಯ ತಡೆಯಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಈ ವೇಳೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ, ಸೀನಿಯರ್ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸತ್ರ ನ್ಯಾಯಾಧೀಶರಾದ ರವಿ ಬೇಟೆಗಾರ್, ಸಿವಿಲ್ ನ್ಯಾಯಾಧೀಶರಾದ ಕ್ರಾಂತಿ ಕಿರಣ್, ಪ್ರೀತಿ, ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ಉಪಾಧ್ಯಕ್ಷ ಸುರೇಶ್ ಮತ್ತು ಕಾರ್ಯದಶಿಗಳಾದ ಕೃಷ್ಣಮೂರ್ತಿ, ವಕೀಲೆ ಹಾಗೂ ವರದಿಗಾರರಾದ ಅನುಪಮ ಸೇರಿದಂತೆ ಇತರರು ಭಾಗವಹಿಸಿದ್ದರು.