ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್ ನಂ.1 ಸ್ಥಾನ ಪಡೆದುಕೊಂಡಿದೆ. 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜನತೆಗಾಗಿ ಹಗಲು ರಾತ್ರಿ ದುಡಿಯುವ ಕರ್ನಾಟಕ ಪೊಲೀಸ್ ಇಲಾಖೆಗೆ ಈ ಗರಿಮೆ ಸಂದಿರುವುದು ಹೆಮ್ಮೆಯ ಸಂಗತಿ.
ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್ ರಿಪೋರ್ಟ್ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಒಟ್ಟು 10 ಅಂಕಗಳನ್ನು ಆಧಾರವಾಗಿಟ್ಟು ನಡೆಸಿದ ಈ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ 6.38 ಅಂಕಗಳಿಕೆಯ ಮೂಲಕ ಪ್ರಥಮ ಸ್ಥಾನದಲ್ಲಿದೆ.
ನಾಗರಿಕರ ಪ್ರಾಣ ರಕ್ಷಣೆ, ಸಮಾಜಘಾತುಕರ ಹೆಡೆಮುರಿ ಕಟ್ಟಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕರ್ನಾಟಕ ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
View Comments
ಒಂದು ಕಡೆ ಸಂತೋಷದ ವಿಚಾರ ಒಂದು ಕಡೆ ದುಃಖದ ವಿಚಾರ ಕರ್ನಾಟಕ ರಾಜ್ಯ ಎಲ್ಲ ರಾಜ್ಯಕ್ಕಿಂತ ಕಡಿಮೆ ಪೊಲೀಸ್ ಇಲಾಖೆಯ ಸಂಬಳ ನೌಕರಸ್ಥರು ನಾವು .
ಇದರ ಬಗ್ಗೆ ಮಾಧ್ಯಮಗಳು ಹೇಳಿಕೆ ಯಾಕೆ ಇಲ್ಲ ?