ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್ ಮತ್ತು ಎಲೆಕ್ಟ್ರಾನಿಕ್ಸ್ ವೇಯಿಂಗ್ ಮಷಿನ್ ಗಳನ್ನು ಅಳವಡಿಸಲು ಸೂಚನೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಅಧಿಕಾರಿಗಳು ಮತ್ತು ನ್ಯಾಯ ಬೆಲೆ ಅಂಗಡಿಗಳ ಮಾಲಿಕರ ಸಂಘದ ಅಧ್ಯಕ್ಷರುಗಳೊಂದಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ಇಂದು ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.

ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ,
ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇಕೆವೈಸಿ ಮಾಡಿಸತಕ್ಕದ್ದು, ಪಡಿತರ ಪರಿಷ್ಕರಣೆಯ ಕಾರ್ಯ ಸಮರ್ಪಕವಾಗಿರಲಿ ಮತ್ತು ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ ಗೆ ಬದಲಾಗಿದ್ದಲ್ಲಿ ಅದನ್ನು ಸಂಬಂದಪಟ್ಟ ತಾಲ್ಲೂಕಿನ ತಹಶಿಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ ಗೆ ವರ್ಗಾಯಿಸಲಾಗುತ್ತದೆ ಎಂದರು.

ತಾಲ್ಲೂಕು‌ ಮಟ್ಟದಲ್ಲಿ ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಪಡಿತರ ಕಾರ್ಡ್ ನ್ನು ಪರಿಶೀಲನೆ ಮಾಡಿ ಸತ್ಯಾಂಶವನ್ನು ನಮಗೆ ಒಂದು ವಾರದೊಳಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ನಿರ್ದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಿ ಎಪಿಎಲ್ ಆಗಿ ಪರಿವರ್ತಿಸುವುದು. ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಕಾರ್ಡ್ ಗಳನ್ನು ರದ್ದು ಮಾಡಬಾರದು ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ನ್ಯಾಯಬೆಲೆ ಅಂಗಡಿಗಳನ್ನು ಆಧ್ಯಾತೆಯ ಮೇಲೆ ಮಂಜೂರು ಮಾಡಲು ಒಂದು ತಿಂಗಳೊಳಗೆ ಕ್ರಮ ವಹಿಸಲಾಗುವುದು. ಇದರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಮೇರೆಗೆ ಸುಮಾರು 3517 ನೂತನ ನ್ಯಾಯ ಬೆಲೆ ಅಂಗಡಿಗಳನ್ನು ಒಳ ಮೀಸಲಾತಿ ಆಧಾರದ ಮೇಲೆ ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನೀಡುತ್ತಿರುವುದು ಎಂದರು.

ನ್ಯಾಯಬೆಲೆ ಅಂಗಡಿ‌ ಮಾಲೀಕರಿಗೆ ಯಾವುದೇ ಸಮಸ್ಯೆಗಳಿಲ್ಲದೆ ಪರಿಹರಿಸಲಾಗುವುದು. ನ್ಯಾಯ ಬೆಲೆ ಅಂಗಡಿಗಳಲ್ಲಿ ಯಂತ್ರಗಳ ಅಳವಡಿಕೆಗೆ ತಾವು ಮುಂದಾಗಿ‌ ಇದನ್ನು ಒಳಪಡಿಸಬೇಕು ತಮಗೆ ಬರುವ ಚಿಲ್ಲರೆ ಲಾಭಾಂಶವನ್ನು ಸರಿಯಾದ ಸಮಯಕ್ಕೆ ಸಮರ್ಪಕವಾಗಿ ನೀಡಲಾಗುತ್ತದೆ ತಾವು ಗ್ರಾಹಕರಿಗೆ ಸರಿಯಾದ ಸಮಯದಲ್ಲಿ ಪಡಿತರ ವಿತರಿಸಬೇಕು ಎಂದರು.

ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ಕಾರ್ಡ್ ಗಳು ಅನರ್ಹ ಕಾರ್ಡಗಳಿದ್ದು ಇವುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಿರುವ ಬಗ್ಗೆ ಚರ್ಚೆ ನಡೆಸಿದ್ದು. ರಾಜ್ಯದಲ್ಲಿ ಅರ್ಹ ಫಲಾನುಭವಿಯನ್ನು ಶೀಘ್ರದಲ್ಲಿ ಗುರುತಿಸಬೇಕು ಅನರ್ಹರನ್ನು ಮಾತ್ರ ತಾವು ಎಪಿಎಲ್ ಗೆ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇತರೆ ರಾಜ್ಯಗಳ ಮಾನದಂಡಗಳನ್ನು ಸಹಾ ತಾವು ಸಂಗ್ರಹಿಸಿ ಅವನ್ನು ಪರಿಶೀಲನೆ ನಡೆಸಿ ಅನ್ವಯಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

3 ಲಕ್ಷದ 96 ಸಾವಿರ ಪಡಿತರ ಕಾರ್ಡ್ ಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ ನೂತನ ಕಾರ್ಡ್ ನೀಡಲು ಕ್ರಮ ವಹಿಸಲು ಸೂಚಿಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಾಲ್ ರಾಗಿಗೆ ರೂ 4886 ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಇದರಿಂದ ಒಟ್ಟು 3000 ಕೋಟಿ ರೂ.ಗಳೊಂದಿಗೆ 2,57,000 ಸಾವಿರ ರೈತರಿಗೆ ಈ ಯೋಜನೆಯು ಪ್ರಯೋಜನವಾಗಲಿದೆ ಎಂದರು.

ಕಾನೂನು ‌ಮಾಪನ ಶಾಸ್ತ್ರ ಇಲಾಖೆಯ ವತಿಯಿಂದ ಬೆಳಗಾವಿ ಮತ್ತು ಕಲಬುರಗಿ ವಿಭಾಗದಲ್ಲಿ ಸುಮಾರು 71 ಸಕ್ಕರೆ ಕಾರ್ಖಾನೆಗಳ ತಪಾಸಣೆ ಮಾಡಿದ್ದು ಕಬ್ಬು ಬೆಳೆಗಾರರ ಹಿಂದೆ ಇದ್ದ ಲೋಪದೋಷಗಳನ್ನು ಸರಿಪಡಿಸಲಾಗಿದೆ ತೂಕದಲ್ಲಿ ಮೋಸವನ್ನು ತಡೆಯಲಾಗಿದೆ ಇಲ್ಲಿಯವರೆಗೂ ಸುಮಾರು 50 ಸಾವಿರ ಕೋಟಿ ರೂಗಳು ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ ಎಂದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಪ್ರಸಾದ್ ಎನ್.ವಿ,ಆಯುಕ್ತರಾದ ಎಂ. ಕನಗವಲ್ಲಿ,ಕಾನೂನು ಮಾಪನ ಇಲಾಖೆಯ ನಿಯಂತ್ರಕರಾದ ಎಂ.ಎಸ್.ಎನ್ ಬಾಬು,ನಿಗಮ ನಿರ್ದೇಶಕ ಜಗದೀಶ್,ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಜಂಟಿ ನಿರ್ದೇಶಕರು ಐಟಿ ರಾಜಶೇಖರ್,ಕುಮುದಾ ಹಾಗೂ ಪಡಿತರ ವಿತರಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ, ಮತ್ತು ಕೃಷ್ಣ ನಾಯಕ್ ಹಾಗೂ ಸಂಘದ ಪಧಾದಿಕಾರಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

4 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

7 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

10 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

12 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

13 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago