ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.

ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.

ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.

ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು.

ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.

ತಾಯಿ ಸರಸ್ವತಿಯ ಆಶೀರ್ವಾದ ಮಗುವಿನ ಶಿಕ್ಷಣದ ಪ್ರಯಾಣದತ್ತ ಸುಗಮವಾಗಿ ಕರೆದೊಯುತ್ತದೆ ಎಂಬ ನಂಬಿಕೆಯೊಂದಿಗೆ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಪ್ರೀತಿಯನ್ನು ತುಂಬಲು ಹಾಗೂ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಲು ಅಕ್ಷರಾಭ್ಯಾಸ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಶಾಲಾ ಕಾರ್ಯದರ್ಶಿ  ಸಿ ಎನ್ ಸತೀಶ್ ರಾಜ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಸಿ.ನಾಗರಾಜು, ಸುನಂದಾ, ಪ್ರಾಂಶುಪಾಲೆ ರಶ್ಮಿ ಸತೀಶ್ ರಾಜ್, ಅನುಸೂಯಾ, ಸಂಯೋಜಕಿ ತೇಜಸ್ವಿನಿ, ಶಿಕ್ಷಕ ವೃಂದ್ಧ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

11 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

16 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

19 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago